ಚಾಮರಾಜನಗರ : ಅರಣ್ಯದೊಳಗೆ ಪ್ರವೇಶ ಮಾಡಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಹನೂರು ವನ್ಯಜೀವಿ ವಲಯದಲ್ಲಿ ನಡೆದಿದೆ.
ಕಾಡಿನಿಂದ ಮರಳು ಸಾಗಣೆ : ಓರ್ವನ ಬಂಧನ - ಚಾಮರಾಜನಗರದಲ್ಲಿ ಕಾಡಿನಿಂದ ಮರಳು ಸಾಗಣೆ
ಅರಣ್ಯದೊಳಗೆ ಪ್ರವೇಶ ಮಾಡಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಚಾಲಕನನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಹನೂರು ವನ್ಯಜೀವಿ ವಲಯದಲ್ಲಿ ನಡೆದಿದೆ.
ಕಾಡಿನಿಂದ ಮರಳು ಸಾಗಣೆ : ಓರ್ವನ ಬಂಧನ
ಹನೂರು ವನ್ಯಜೀವಿ ವಲಯದಲ್ಲಿ ಮರಳು ತೆಗೆಯಲು ಹೊಂಚು ಹಾಕುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿವಲಯ ಅರಣ್ಯಾಧಿಕಾರಿ ರಾಜಶೇಖರಪ್ಪಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಅರಣ್ಯದಿಂದ ಮರಳು ತುಂಬಿಕೊಂಡು ಗ್ರಾಮದ ಕಡೆಗೆ ಬರುತ್ತಿದ್ದಾಗ ದಾಳಿ ನಡೆಸಿ ಚಾಲಕ ಹಾಗೂ ಮರಳು ತುಂಬಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ದಾಳಿಯಲ್ಲಿ ಅರಣ್ಯ ರಕ್ಷಕ ಸುಭಾಷ್ ಚಂದ್ರ ಬೋಸ್ಲೆ, ಯಲಗೂರಪ್ಪ ಗುಬ್ಬಿ ಇದ್ದರು.