ಚಾಮರಾಜನಗರ :ಶಾಲೆಗಳನ್ನು ಯಾವಾಗ ಆರಂಭಿಸಬೇಕು, ಯಾವ ತರಗತಿ ಮೊದಲ ಆರಂಭಿಸಬೇಕು, ಹೇಗೆ ಆರಂಭಿಸಬೇಕು ಎಂಬುದರ ಕುರಿತು ಇನ್ನೊಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದರು.
ಶಾಲೆಗಳನ್ನ ಆರಂಭಿಸುವ ಕುರಿತು ಇನ್ನೊಂದು ವಾರದಲ್ಲಿ ತೀರ್ಮಾನ.. ಶಿಕ್ಷಣ ಸಚಿವ ಸುರೇಶ್‌ಕುಮಾರ್
ಶಿಕ್ಷಣ ತಜ್ಞರು, ಶಿಕ್ಷಣ ಸಂಘಟನೆಗಳು, ಜನಪ್ರತಿನಿಧಿಗಳ ಅಭಿಪ್ರಾಯ ಕ್ರೋಢೀಕರಿಸಿ ಒಂದು ವಾರದಲ್ಲಿ ಇಲಾಖೆ ತೀರ್ಮಾನವನ್ನು ಪ್ರಕಟ ಮಾಡಲಿದೆ..
ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಗ್ರಾಮಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದಲ್ಲ ಹತ್ತು ಬಾರಿ ಹೇಳಿದ್ದೇನೆ. ಶಾಲೆಗಳನ್ನು ಆರಂಭಿಸುವ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ. ಅ.15ರಿಂದ ಹಂತ ಹಂತವಾಗಿ ಪ್ರಾರಂಭಿಸಬಹುದೆಂದು ಕೇಂದ್ರ ಸರ್ಕಾರ ಅವಕಾಶ ನೀಡಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಶಿಕ್ಷಣ ತಜ್ಞರು, ಶಿಕ್ಷಣ ಸಂಘಟನೆಗಳು, ಜನಪ್ರತಿನಿಧಿಗಳ ಅಭಿಪ್ರಾಯ ಕ್ರೋಢೀಕರಿಸಿ ಒಂದು ವಾರದಲ್ಲಿ ಇಲಾಖೆ ತೀರ್ಮಾನವನ್ನು ಪ್ರಕಟ ಮಾಡಲಿದೆ ಎಂದು ಸ್ಪಷ್ಟಪಡಿಸಿದರು. ಒಂದು ಟರ್ಮ್‌ಗಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡಿರುವ ಖಾಸಗಿ ಶಾಲೆಗಳ ವಿರುದ್ಧ ಸಂಬಂಧಪಟ್ಡ ಬಿಇಒಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದೇ ವೇಳೆ, ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಕುಗ್ರಾಮಗಳಿಗೆ ಶೀಘ್ರ ಕಚ್ಚಾ ರಸ್ತೆ, ಮೊಬೈಲ್ ಪಡಿತರ ವ್ಯವಸ್ಥೆ ಮತ್ತು ವಿದ್ಯುತ್ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.