ಚಾಮರಾಜನಗರ:ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನಲ್ಲಿ ನಡೆದಿದೆ.
ಪ್ರತ್ಯೇಕ ಪ್ರಕರಣ: ವೀಲಿಂಗ್ ವೇಳೆ ಯುವಕ ಸೇರಿದಂತೆ ಇಬ್ಬರು ಬೈಕ್ ಸವಾರರು ಸಾವು!
ವೀಲಿಂಗ್ ಮಾಡುತ್ತಿದ್ದ ಯುವಕ ಸೇರಿದಂತೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ವೀಲಿಂಗ್ ವೇಳೆ ಯುವಕ ಸೇರಿದಂತೆ ಇಬ್ಬರು ಬೈಕ್ ಸವಾರರು ಸಾವು
ಚಾಮರಾಜನಗರ ತಾಲೂಕಿನ ಬದನಗುಪ್ಪೆ ಬಳಿ ವೀಲಿಂಗ್ ಮಾಡಲು ಹೋಗಿ ನಗರದ ಗಾಳಿಪುರ ನಿವಾಸಿ ತಯ್ಯೀಬ್ (30) ಎಂಬಾತ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಸಂಬಂಧ, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು, ಚಾಮರಾಜನಗರ ತಾಲೂಕಿನ ಹರದನಹಳ್ಳಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ವಿ.ಸಿ.ಹೊಸೂರು ಗ್ರಾಮದ ಪ್ರದೀಪ್ (30) ಎಂಬಾತ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.