ಚಾಮರಾಜನಗರ: ಕೆರೆ ಏರಿ ಮೇಲೆ ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಕಾಮಗೆರೆಯಲ್ಲಿ ನಡೆದಿದೆ.
ಕಾಮಗೆರೆ ಗ್ರಾಮದ ಕೆರೆಯ ಏರಿ ಮೇಲೆ ಜೂಜಾಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 7 ಮಂದಿಯನ್ನು ಬಂಧಿಸಿದ್ದು, 40,130 ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.