ಕರ್ನಾಟಕ

karnataka

ETV Bharat / state

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ - ಲೈಂಗಿಕ ದೌರ್ಜನ್ಯ

ಶಾಲೆಗೆ ತೆರಳುತ್ತಿದ್ದ ಬಾಲಕಿ ಜೊತೆ ಸಲುಗೆ ಬೆಳೆಸಿಕೊಂಡು ಪ್ರೀತಿ, ಪ್ರೇಮ ಎಂದು ತಲೆಕೆಡೆಸಿ ಲೈಂಗಿಕ ದೌರ್ಜನ್ಯ ನಡೆಸಿದ್ದರ ಸಂಬಂಧ ಕಳೆದ 2017 ರಲ್ಲಿ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

guilty Puttaraju
ಅಪರಾಧಿ ಪುಟ್ಟರಾಜು

By

Published : Dec 3, 2022, 7:36 PM IST

ಚಾಮರಾಜನಗರ: ಶಾಲಾ ಬಾಲಕಿಗೆ ಪ್ರೀತಿ ಪ್ರೇಮ ಎಂದು ತಲೆಕೆಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ.

ಚಾಮರಾಜನಗರ ತಾಲೂಕಿನ‌ ಮರಿಯಾಲ ಗ್ರಾಮದ ಪುಟ್ಟರಾಜು ಶಿಕ್ಷೆಗೊಳಗಾದ ಅಪರಾಧಿ. ಶಾಲೆಗೆ ತೆರಳುತ್ತಿದ್ದ ಬಾಲಕಿ ಜೊತೆ ಪುಟ್ಟರಾಜು ಸಲುಗೆ ಬೆಳೆಸಿಕೊಂಡು ಪ್ರೀತಿ, ಪ್ರೇಮ ಎಂದು ತಲೆಕೆಡೆಸಿ ಲೈಂಗಿಕ ದೌರ್ಜನ್ಯ ನಡೆಸಿದ್ದರ ಸಂಬಂಧ ಕಳೆದ 2017 ರಲ್ಲಿ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಕ್ಕಳ ಸ್ನೇಹಿ ನ್ಯಾಯಾಲಯದಲ್ಲಿ ಈ ಸಂಬಂಧ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 7 ವರ್ಷ ಕಠಿಣ ಶಿಕ್ಷೆ 5 ಸಾವಿರ ದಂಡ ವಿಧಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.

ಇದನ್ನೂ ಓದಿ:8ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ: ಸಹಪಾಠಿಗಳಿಂದಲೇ ಕೃತ್ಯ!

ABOUT THE AUTHOR

...view details