ಚಾಮರಾಜನಗರ: ಜನರ ಜೀವದೊಂದಿಗೆ ಚೆಲ್ಲಾಟ ಆಡುತ್ತಿದ್ದ ನಕಲಿ ಅಲೋಪತಿ ವೈದ್ಯರಿಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದರು. ನಕಲಿ ಕ್ಲಿನಿಕ್ಗಳನ್ನು ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿಯಲ್ಲಿ ಘಟನೆ ನಡೆದಿದೆ.
ತಾಲೂಕಿನ ನಕಲಿ ಕ್ಲಿನಿಕ್ಗಳ ಮೇಲೆ ಡಿಎಚ್ಒ ಡಾ. ವಿಶ್ವೇಶ್ವರಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಕೌದಳ್ಳಿ ಗ್ರಾಮದಲ್ಲಿರುವ ಆದಮ್ ಕ್ಲಿನಿಕ್, ಜನತಾ ಕ್ಲಿನಿಕ್ ಹಾಗೂ ದೀಪಾ ಕ್ಲಿನಿಕ್ಗಳಿಗೆ ನೋಟಿಸ್ ಜಾರಿ ಮಾಡಿ ಬಂದ್ ಮಾಡಿಸಿದ್ದಾರೆ. ಹನೂರು ತಾಲೂಕಿನ ವಿವಿಧೆಡೆ ಇಂಥ ಕ್ಲಿನಿಕ್ಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರು ದೂರು ನೀಡಿದ್ದರು.