ಚಾಮರಾಜನಗರ:ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಕೈ ಪಡೆ ಮುಂದುವರೆದ ಭಾಗವಾಗಿ ನಾಳೆ ನಗರದಲ್ಲಿ ಸಿದ್ದರಾಮಯ್ಯ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಈ ಸಂಬಂಧ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹೆಚ್.ಸಿ. ಮಹಾದೇವಪ್ಪ, ಆರ್.ಧ್ರುವನಾರಾಯಣ ಸೇರಿದಂತೆ ಹಲವು ಮುಖಂಡರು ನಗರದ ವಿವಿಧೆಡೆ ಮೆರವಣಿಗೆ ನಡೆಸಲಿದ್ದಾರೆ.
ಪ್ರತಿಭಟನಾ ಮೆರವಣಿಗೆ ಬಳಿಕ ಮಾರಿಗುಡಿ ಸಮೀಪ ವೇದಿಕೆ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು. ಹಳೆ ಮೈಸೂರು ಭಾಗದಲ್ಲಿ ತನ್ನದೇ ವರ್ಚಸ್ಸು ಹೊಂದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ನಾಳೆ ಪ್ರತಿಭಟಿಸುವ ಮೂಲಕ ಕೈ ಪಡೆಗೆ ಶಕ್ತಿ ತುಂಬಲಿದ್ದಾರೆ.