ಗುಂಡ್ಲುಪೇಟೆ:ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಸದನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ತಾಲೂಕು ಆದಿಜಾಂಬವ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಮಿತಿ ಪದಾಧಿಕಾರಿಗಳು, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರಕ್ಕೆ 2012 ರಲ್ಲಿ ಸಲ್ಲಿಸಲಾಗಿದೆ. ಆಯೋಗ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಕೇಂದ್ರಕ್ಕೆ ಕಳುಹಿಸಲು ಇದುವರೆಗೂ ಯಾವುದೇ ಸರ್ಕಾರ ಮುಂದಾಗಿಲ್ಲ. ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಹಾದಿಯಾಗಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ, ಅದಕ್ಕೂ ಮೊದಲು ಬಿಜೆಪಿ ಸರ್ಕಾರವೂ ಸ್ಪಂದಿಸಲಿಲ್ಲ. ಈಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಸಮುದಾಯದ ಪ್ರಮುಖ ಬೇಡಿಕೆ ಒಪ್ಪಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದರು.