ಕರ್ನಾಟಕ

karnataka

ETV Bharat / state

ಯಡಿಯೂರಪ್ಪ ಶೀಘ್ರ ಗುಣಮುಖಕ್ಕೆ ಮಾದಪ್ಪನ ಬೆಟ್ಟದಲ್ಲಿ ವಿಶೇಷ ಪೂಜೆ, ಅಭಿಷೇಕ - chamarajanagara news

ಕೋವಿಡ್ ಸೋಂಕಿತರಾಗಿರುವ ಸಿಎಂ ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಹನೂರು ತಾಲೂಕಿನ‌ ಮಲೆಮಹದೇಶ್ವರ ಬೆಟ್ಟದಲ್ಲಿ ಸಂಜೆ ವಿಶೇಷ ಪೂಜೆ ನೆರವೇರಿಸಲಾಯಿತು.

malemahadeshwara
malemahadeshwara

By

Published : Aug 3, 2020, 11:23 PM IST

ಚಾಮರಾಜನಗರ: ಕೊರೊನಾ ಸೋಂಕಿನಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೇಗ ಗುಣಮುಖರಾಗುವಂತೆ ಮಾದಪ್ಪನ ಬೆಟ್ಟದಲ್ಲಿ ಸಂಜೆ 7ರಿಂದ 8ರ ವರೆಗೆ ಏಕವಾರ‌ರುದ್ರಾಭಿಷೇಕ ಹಾಗೂ ಮಹಾ ಸಂಕಲ್ಪ ಪೂಜೆಯೊಂದಿಗೆ ಮಹಾಮಂಗಳಾರತಿಯನ್ನು ಪ್ರಧಾನ ಆಗಮಿಕರಾದ ಕರವೀರಸ್ವಾಮಿ ನೆರವೇರಿಸಿದರು.

ಸಿಎಂ ಮತ್ತು ಅವರ ಕುಟುಂಬ ವರ್ಗ ಶೀಘ್ರ ಸೋಂಕು ಮುಕ್ತವಾಗಲೆಂದು ಪ್ರಾರ್ಥಿಸಲಾಗಿದೆ ಎಂದು ಶ್ರೀಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದ್ದಾರೆ.

ಯಡಿಯೂರಪ್ಪ ಶೀಘ್ರ ಗುಣಮುಖಕ್ಕೆ ಮಾದಪ್ಪನ ಬೆಟ್ಟದಲ್ಲಿ ವಿಶೇಷ ಪೂಜೆ, ಅಭಿಷೇಕ

ಸಿಎಂ ಯಡಿಯೂರಪ್ಪ ಮಲೆಮಹದೇಶ್ವರ ಬೆಟ್ಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದವರು ಇದರ ಉಪಾಧ್ಯಕ್ಷರಾಗಿರುತ್ತಾರೆ.

ABOUT THE AUTHOR

...view details