ಚಾಮರಾಜನಗರ: ಆಗಸ್ಟ್ 10ರ ಸುಮಾರಿಗೆ ಎಸ್ಎಸ್ಎಲ್ಸಿ ಫಲಿತಾಂಶ ಬರಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಇದೇ ಸೋಮವಾರ ಇಲ್ಲವೇ ಮಂಗಳವಾರ ಟಾಸ್ಕ್ ಫೋರ್ಸ್ ಸಮಿತಿ ವರದಿ ನೀಡಲಿದ್ದು ಅದನ್ನಾಧರಿಸಿ ಫಲಿತಾಂಶ ಪ್ರಕಟಿಸುವ ಕುರಿತು ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.
ಆಗಸ್ಟ್ 10ರ ಸುಮಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ಶಿಕ್ಷಣ ಸಚಿವ ಸುರೇಶ್ ಕುಮಾರ್ - SSLC Examination
SSLC Results: ಕೆಲವು ದಿನಗಳ ಹಿಂದಷ್ಟೇ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದಿದೆ. ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುರೇಶ್ ಕುಮಾರ್, ಆ.10 ರ ಸುಮಾರಿಗೆ ಎಸ್ಎಸ್ಎಲ್ಸಿ ಫಲಿತಾಂಶ ಹೊರಬೀಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್
ಖಾಸಗಿ ಶಾಲೆಗಳ ಕಳಕಳಿಯನ್ನು ಅರ್ಥ ಮಾಡಿಕೊಳ್ಳುತ್ತೇನೆ ಎಂದ ಅವರು, 25 ರ ಬಳಿಕ ಏನೇನು ಬೆಳವಣಿಗೆಗಳು ನಡೆಯಲಿದೆ ನೋಡೋಣ. ರಾಜ್ಯ ಮಟ್ಟದಲ್ಲಂತೂ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಕೇಂದ್ರ ನಾಯಕರ ಸೂಚನೆಯಂತೆ ನಡೆದುಕೊಳ್ಳುವುದಾಗಿ ಸಿಎಂ ಈಗಾಗಲೇ ತಿಳಿಸಿದ್ದಾರೆ ನೋಡೋಣ ಎಂದಷ್ಟೇ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
Last Updated : Jul 23, 2021, 3:28 PM IST