ಚಾಮರಾಜನಗರ: ಸಾವಿರಾರು ವರ್ಷಗಳ ಇತಿಹಾಸ ಇರುವ ಕಾರಾಪುರ ವಿರಕ್ತಮಠಕ್ಕೆ ಉತ್ತರಾಧಿಕಾರಿಯಾಗಿ ಚಾಮರಾಜನಗರ ಮರಿಯಾಲ ಮಠದ 10ನೇ ತರಗತಿ ವಿದ್ಯಾರ್ಥಿಯನ್ನು ನೇಮಕ ಮಾಡಲಾಗಿದೆ.
ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ದೊರೆಸ್ವಾಮಿ ಹಾಗೂ ಶೀಲಾ ದಂಪತಿ ಪುತ್ರ ಸಾಗರ್ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ಗುರುವಾರ ಪಟ್ಟಣದ ಕಾರಾಪುರ ವಿರಕ್ತ ಮಠದಲ್ಲಿ ಮಠಾಧೀಶರಾದ ಬಸವಲಿಂಗ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸನ್ಯಾಸ ದೀಕ್ಷೆ ಹಾಗೂ ಪಟ್ಟಾಧಿಕಾರ ಕಾರ್ಯಕ್ರಮವನ್ನು ಸರಳವಾಗಿ ನೆರವೇರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.