ಕೊಳ್ಳೇಗಾಲ: ಕೊರೊನಾ ಸಂಕಷ್ಟದ ಸಮಯದಲ್ಲಿ ನಾಯಕತ್ವ ಬದಲಾವಣೆ ಮಾಡುವುದು ಅಪ್ರಸ್ತುತ. ಇದು ತಪ್ಪು. ಯಡಿಯೂರಪ್ಪ ಅವರು ಒಬ್ಬ ಉತ್ತಮ ಸಿಎಂ ಆಗಿ ಸರ್ಕಾರವನ್ನು ಮುನ್ನಡೆಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಭಿಪ್ರಾಯಪಟ್ಟರು.
ಕಳೆದೊಂದು ತಿಂಗಳಿಂದ 30 ಗುಂಪುಗಳಿಗೆ ಆರ್ಥಿಕ ಪರಿಹಾರ ಘೋಷಣೆ ಮಾಡಿ ಸಿಎಂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಾರಂಭದಲ್ಲಿ ಸರ್ಕಾರ ಮೈಮರೆತರೂ ಕೂಡ ಬಳಿಕ ಎಚ್ಚೆತ್ತುಕೊಂಡಿದೆ. ಯಡಿಯೂರಪ್ಪ ತಮ್ಮ ಕೆಲಸಗಳನ್ನು ಬೆಂಗಳೂರಿನಲ್ಲಿ ಕುಳಿತು ನಿರ್ವಹಣೆ ಮಾಡುತ್ತಿಲ್ಲ. ಬದಲಾಗಿ ಜಿಲ್ಲೆ ಜಿಲ್ಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಸಹ ಅವರವರ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಂತಹ ಯುದ್ದ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿರುವುದು ದುರಂತ.