ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸ್ಟೆನೋಗ್ರಾಫರ್/ ಶೀಘ್ರ ಲಿಪಿಗಾರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಹುದ್ದೆಯ ವಿವರ: ಒಂದು ಶೀಘ್ರ ಲಿಪಿಗಾರ ಹುದ್ದೆ.
ವಿದ್ಯಾರ್ಹತೆ:ಪಿಯುಸಿ/ 3 ವರ್ಷದ ಡಿಪ್ಲೋಮೋ ಕೋರ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆ ಬೆರಳಚ್ಚು ಹಾಗೂ ಶೀಘ್ರ ಲಿಪಿ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
ವೇತನ:27,650-52,650 ರೂಪಾಯಿ ಮಾಸಿಕ ವೇತನ.
ವಯೋಮಿತಿ: ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಅನುಸಾರ ವಯೋಮಿತಿ ಹೊಂದಿರಬೇಕು.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕವಿದೆ.
ಆಯ್ಕೆ ಪ್ರಕ್ರಿಯೆ: ಮೆರಿಟ್ ಲಿಸ್ಟ್, ಟೈಪಿಂಗ್ ಪರೀಕ್ಷೆ, ಕನ್ನಡ ಭಾಷೆ ಪರೀಕ್ಷೆ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ.
ಅಭ್ಯರ್ಥಿಗಳು ಅಕ್ಟೋಬರ್ 9ರಿಂದ ಅರ್ಜಿ ಹಾಕಬಹುದಾಗಿದ್ದು, ನವೆಂಬರ್ 7 ಕಡೆಯ ದಿನಾಂಕ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ನವೆಂಬರ್ 8. ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರಗಳಿಗೆ districts.ecourts.gov.in ಈ ಜಾಲತಾಣಕ್ಕೆ ಭೇಟಿ ನೀಡಿ.
ಇದನ್ನೂ ಓದಿ: ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳು; ನೇಮಕಾತಿಗೆ ಕೆಇಎ ಅಧಿಸೂಚನೆ