ಚಾಮರಾಜನಗರ :5 ವರ್ಷದ ಬಾಲಕಿ ಮೇಲೆ ಮಲ ತಂದೆಯೇ ಅತ್ಯಾಚಾರ ಎಸಗಿ ಮೃಗೀಯ ವರ್ತನೆ ತೋರಿರುವ ಘಟನೆ ನಗರದ ಗಾಳಿಪುರ ಬಡಾವಣೆಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.
ಚಾಮರಾಜನಗರ : 5 ವರ್ಷದ ಬಾಲಕಿ ಮೇಲೆ ಮಲ ತಂದೆಯಿಂದ ಅತ್ಯಾಚಾರ - ಐದು ವರ್ಷದ ಬಾಲಕಿ ಮೇಲೆ ಮಲ ತಂದೆಯಿಂದ ಅತ್ಯಾಚಾರ
ಬಾಲಕಿಯು ತನಗೆ ನೋವೆಂದು ಅಲವತ್ತುಕೊಂಡಾಗ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಪಟ್ಟಣ ಠಾಣೆ ಪಿಐ ಮಹಾದೇವಶೆಟ್ಟಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಬಾಲಕಿಗೆ ಅಗತ್ಯ ವೈದ್ಯಕೀಯ ಉಪಚಾರ ಮಾಡಲಾಗಿದೆ..
ಮಲ ತಂದೆಯಿಂದ ಅತ್ಯಾಚಾರ
ಸೈಯಿದ್ ಮುಜೀಬ್(45) ಎಂಬಾತ ಬಂಧಿತ ಆರೋಪಿ. ಈತ ಕಳೆದ ಎರಡೂವರೆ ತಿಂಗಳುಗಳ ಹಿಂದೆಯಷ್ಟೇ ಪತಿಯಿಂದ ಬೇರ್ಪಟ್ಟಿದ್ದ ಮೂರು ಮಕ್ಕಳ ತಾಯಿಯೊಬ್ಬಳನ್ನು ಮದುವೆಯಾಗಿದ್ದ. ಮಂಗಳವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಖ ತೊಳೆದುಕೊಳ್ಳುತ್ತಿದ್ದ ಮಗಳ ಮೇಲೆ ಮೃಗೀಯ ವರ್ತನೆ ತೋರಿದ್ದಾನೆ.
ಬಾಲಕಿಯು ತನಗೆ ನೋವೆಂದು ಅಲವತ್ತುಕೊಂಡಾಗ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಪಟ್ಟಣ ಠಾಣೆ ಪಿಐ ಮಹಾದೇವಶೆಟ್ಟಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಬಾಲಕಿಗೆ ಅಗತ್ಯ ವೈದ್ಯಕೀಯ ಉಪಚಾರ ಮಾಡಲಾಗಿದೆ.
TAGGED:
Step-Father Raped Daughter