ಚಾಮರಾಜನಗರ : ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಇಂದು ಜಿಲ್ಲೆಯಲ್ಲಿ 25 ಅಭ್ಯರ್ಥಿಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟಾರೆ ಇದುವರೆಗೆ 76 ಅಭ್ಯರ್ಥಿಗಳಿಂದ 104 ನಾಮಪತ್ರಗಳು ಸಲ್ಲಿಕೆಯಾಗಿವೆ. ಹನೂರು ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಜಿ. ಮುರುಗೇಶನ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹರೀಶ್.ಕೆ., ಜಾತ್ಯತೀತ ಜನಾತಾದಳ ಅಭ್ಯರ್ಥಿಯಾಗಿ ಎಂ.ಆರ್.ಮಂಜುನಾಥ್, ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಮಾದೇಶ.ಎಂ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಡಾ.ಪ್ರೀತನ್. ಕೆ.ಎನ್, ಪಕ್ಷೇತರ ಅಭ್ಯರ್ಥಿಯಾಗಿ ಸಿ. ಸಿದ್ದಾರ್ಥನ್ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ :ಕಾಂಗ್ರೆಸ್ ಮೂಲಭೂತವಾದಿಗಳನ್ನು ಆಮದು ಮಾಡ್ತಿದೆ: ಸುಧಾಂಶು ತ್ರಿವೇದಿ ಗಂಭೀರ ಆರೋಪ
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ನಿಂಗರಾಜ್. ಜಿ., ಭಾರತೀಯ ಬೆಳಕು ಪಾರ್ಟಿ ಅಭ್ಯರ್ಥಿಯಾಗಿ ವಿನೋದ್.ಎಸ್. ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳಾಗಿ ನಾಗರಾಜು, ರೇಖಾ, ಇಂಡಿಯನ್ ಮೂವ್‍ಮೆಂಟ್ ಪಾರ್ಟಿ ಅಭ್ಯರ್ಥಿಯಾಗಿ ಕೆ.ಹೆಚ್.ಅಂಜನಮೂರ್ತಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ರಾಜೇಶ್.ಎಂ., ಮಹಾದೇವ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ.