ಕೊಳ್ಳೇಗಾಲ:ನಗರದ ಆಶ್ರಯ ಬಡಾವಣೆಯಲ್ಲಿ ಏಳಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಕಲುಷಿತ ನೀರಿನಿಂದ ಈ ಘಟನೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದ ಹಿನ್ನೆಲೆ ಎಸಿ ಹಾಗೂ ತಹಶೀಲ್ದಾರ್ ಕುನಾಲ್ ಅಸ್ವಸ್ಥರಿದ್ದ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ.
ನಂತರ ವೈದ್ಯರಿಂದ ಮಾಹಿತಿ ಪಡೆದು 8 ಮಂದಿ ಭೇದಿ, ವಾಂತಿ ಇನ್ನಿತರ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ 6 ಮಂದಿ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈಗಾಗಲೇ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೀರು ಕಲುಷಿತ ಶಂಕೆ ಆರೋಪದ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದು ಕೊಂಡಿದ್ದಾರೆ. ನಾಳೆ ನಾನೇ ಖುದ್ದು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡುತ್ತೇನೆ. ಇದರಲ್ಲಿ ನಗರಸಭೆ ಸಿಬ್ಬಂದಿ ಕರ್ತವ್ಯ ಲೋಪವಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನಗರಸಭೆ ಆಯುಕ್ತರಿಗೆ ತರಾಟೆ:ಆಸ್ಪತ್ರೆಯಲ್ಲಿರುವ ಅಸ್ವಸ್ಥರ ಭೇಟಿ ವೇಳೆ ನಗರಸಭೆ ಆಯುಕ್ತ ನಾಗಶೆಟ್ಟಿ ಅಧಿಕಾರಿಗಳೊಂದಿಗೆ ಆಗಮಿಸಿದ್ದರು. ಇದೇ ವೇಳೆ, ಕುಟುಂಬದವರು ಆಯುಕ್ತ ನಾಗಶೆಟ್ಟಿ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವು ನಡೆಯಿತು.