ಚಾಮರಾಜನಗರ:ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತದ ಮೊದಲನೇ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಜಾಮೀನಿಗಾಗಿ ಸುಪ್ರೀಂ ಮೊರೆ ಹೋಗಿದ್ದಾರೆ.
ಸುಳ್ವಾಡಿ ವಿಷ ಪ್ರಸಾದ ದುರಂತ.. ಜಾಮೀನಿಗಾಗಿ ಸುಪ್ರೀಂ ಮೆಟ್ಟಿಲೇರಿದ ಇಮ್ಮಡಿ.. - Sulwadi poisoning case accuse mahadaevaswamy bail news
ಸುಳ್ವಾಡಿ ವಿಷ ಪ್ರಸಾದ ದುರಂತದ ಮೊದಲನೇ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಜಾಮೀನಿಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಜಾಮೀನಿಗಾಗಿ ಸುಪ್ರೀಂ ಮೆಟ್ಟಿಲೇರಿದ ಇಮ್ಮಡಿ
ಹೈಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆ ಕಳೆದ 21ರಂದು ಸುಪ್ರೀಂಕೋರ್ಟಿನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಯಬೇಕಿದೆ. ಪ್ರಕರಣದ ಆರೋಪಿಗಳಾದ ಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ದೊಡ್ಡಯ್ಯ, ಮಾದೇಶ ಎಲ್ಲರಿಗೂ ಜಿಲ್ಲಾ ಮತ್ತು ಹೈಕೋರ್ಟ್ನಲ್ಲಿ ಜಾಮೀನು ನಿರಾಕರಿಸಲಾಗಿತ್ತು. ಘಟನೆ ನಡೆದು ಇದೇ ಡಿಸೆಂಬರ್‌ಗೆ ಒಂದು ವರ್ಷವಾಗಲಿದ್ದು ದುರಂತದಲ್ಲಿ 17 ಮಂದಿ ಮೃತಪಟ್ಟು ನೂರಾರು ಮಂದಿ ಅಸ್ವಸ್ಥರಾಗಿದ್ದರು.