ಚಾಮರಾಜನಗರ: ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಟೆಂಪೋ ಟ್ರಾವೆಲರ್ವೊಂದು ಪಲ್ಟಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಪುರದ ಬಳಿ ನಡೆದಿದ್ದು, ತಮ್ಮ ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ.
ಶಬರಿಮಲೆಗೆ ತೆರಳುತ್ತಿದ್ದ ಟೆಂಪೋ ಪಲ್ಟಿ... ಅಪಶಕುನವೆಂದು ಯಾತ್ರೆ ರದ್ದು! - chamrajanagara latest news
ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಟೆಂಪೋ ಟ್ರಾವೆಲರ್ವೊಂದು ಪಲ್ಟಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಪುರದ ಬಳಿ ನಡೆದಿದ್ದು, ತಮ್ಮ ಯಾತ್ರೆಯನ್ನು ಸ್ಥಗಿತಗೊಳಿಸಿ ನಂಜನಗೂಡಿನ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆರಳಿದ್ದಾರೆ.

ಶಬರಿಮಲೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಪಲ್ಟಿ....ಅಪಶಕುನವೆಂದು ಯಾತ್ರೆ ರದ್ದು!
ಮುಂದೆ ತೆರಳುತ್ತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಮುಂದಾದಾಗ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರಿನ ಮಾಗಡಿಯಿಂದ ಶಬರಿಮಲೆಗೆ 11 ಮಂದಿ ಮಾಲಾಧಾರಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಅದೃಷ್ಟವಶಾತ್ ಎಲ್ಲಾ ಯಾತ್ರಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ವಾಹನ ಪಲ್ಟಿಯಾಗಿದ್ದರಿಂದ ಅಪಶಕುನವೆಂದು ಭಾವಿಸಿ ಶಬರಿಮಲೆ ಯಾತ್ರೆ ಮೊಟಕುಗೊಳಿಸಿ ನಂಜನಗೂಡಿನ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆರಳಿದ್ದಾರೆ. ಸದ್ಯ ಈ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.