ಕರ್ನಾಟಕ

karnataka

ETV Bharat / state

ಚಾಮರಾಜನಗರ: ಆನ್​ಲೈನ್ ತರಗತಿಗೆ ಮೊಬೈಲ್ ಕೊಡಿಸಲಿಲ್ಲವೆಂದು ಬಾಲಕಿ ಆತ್ಮಹತ್ಯೆ!

ಆನ್​​​ಲೈನ್ ತರಗತಿಗೆ ಮೊಬೈಲ್ ಕೊಡಿಸಲಿಲ್ಲವೆಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.

ಬಾಲಕಿ ಆತ್ಮಹತ್ಯೆ
ಬಾಲಕಿ ಆತ್ಮಹತ್ಯೆ

By

Published : Aug 18, 2020, 2:00 PM IST

ಚಾಮರಾಜನಗರ: ಆನ್​​​ಲೈನ್ ತರಗತಿಗೆ ಮೊಬೈಲ್ ಕೊಡಿಸಲಿಲ್ಲವೆಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಜೇಶ್ ಎಂಬುವರ ಮಗಳು ಹರ್ಷಿತಾ(15) ಮೃತ ದುರ್ದೈವಿ. ಈಕೆ ಗ್ರಾಮದ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಆನ್​ಲೈನ್ ತರಗತಿಗೆ ಮೊಬೈಲ್ ಕೊಡಿಸು ಎಂದು ಪಾಲಕರನ್ನು ಪೀಡಿಸಿದ್ದಾಳೆ‌. ರಾಜೇಶ್ ಟೈಲರಿಂಗ್ ವೃತ್ತಿ ಮಾಡುತ್ತಿದ್ದು, ಯಾವುದಾದರೂ ಹಣ ಬಂದಾಗ ಕೊಡಿಸುತ್ತೇನೆಂದು ಹೇಳಿದ್ದಾರೆ. ಇಷ್ಟಕ್ಕೆ ಮನನೊಂದ ಬಾಲಕಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಸದ್ಯ ಮೃತದೇಹ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿದ್ದು, ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ABOUT THE AUTHOR

...view details