ಕೊಳ್ಳೇಗಾಲ: ಒಣಸೌದೆ ಕಡಿಯಲು ಮರ ಹತ್ತಿದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಜರುಗಿದೆ.
ಕೊಳ್ಳೇಗಾಲ: ಸೌದೆ ಕಡಿಯಲು ಹೋಗಿ ಆಯತಪ್ಪಿ ಮರದಿಂದ ಬಿದ್ದ ವ್ಯಕ್ತಿ ಸಾವು - kollegala death case
ಕುಣಗಳ್ಳಿ ಗ್ರಾಮದ ಕೃಷ್ಣ (32) ಎಂಬುವವರು ಒಣಸೌದೆ ಕಡಿಯುವ ಸಲುವಾಗಿ ಗ್ರಾಮದ ಮಾರಮ್ಮ ದೇವಾಲಯದ ಆವರಣದಲ್ಲಿದ್ದ ಮರ ಹತ್ತಿದ ವೇಳೆ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಆಸ್ಪತ್ರೆಯಲ್ಲಿ ದಾಖಲಿಸಿದ್ದರೂ ಕೂಡ, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ಕೃಷ್ಣ
ತಾಲೂಕಿನ ಕುಣಗಳ್ಳಿ ಗ್ರಾಮದ ಕೃಷ್ಣ (32) ಮೃತ ದುರ್ದೈವಿ. ಗುರುವಾರ ಮರ ಕಡಿಯುವ ಸಲುವಾಗಿ ಗ್ರಾಮದ ಮಾರಮ್ಮ ದೇವಾಲಯದ ಆವರಣದಲ್ಲಿದ್ದ ಮರ ಹತ್ತಿದ ವೇಳೆ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು.
ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ವ್ಯಕ್ತಿ ಮೃತಪಟ್ಟಿದ್ದಾರೆ. ಸದ್ಯ ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.