ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ 24 ಮಂದಿಯಲ್ಲಿ 22 ಮಂದಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರವನ್ನು ವಿತರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಹೈಕೋರ್ಟ್ ಆದೇಶದಂತೆ 22 ಮಂದಿ ವಾರಸುದಾರರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಧನವನ್ನು ಆರ್.ಟಿ.ಜಿ.ಎಸ್ ಮೂಲಕ ಪಾವತಿಸಲಾಗಿದೆ. ಉಳಿದ ಇಬ್ಬರು ಮೃತ ವ್ಯಕ್ತಿಗಳು ಹಾಗೂ ಅವರ ಕಾನೂನು ಬದ್ದ ವಾರಸುದಾರರು ಬೆಂಗಳೂರು ಜಿಲ್ಲೆಗೆ ಸೇರಿದವರಾಗಿದ್ದಾರೆ. ಈ ಇಬ್ಬರು ಮೃತರ ಕಾನೂನು ಸಮ್ಮತ ವಾರಸುದಾರರ ವಿವರ ಹಾಗೂ ದಾಖಲೆಗಳ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿಯವರಿಂದ ವರದಿ ಕೇಳಿ ಪತ್ರ ಬರೆಯಲಾಗಿದೆ. ವರದಿ ಬಂದ ಕೂಡಲೇ ಬೆಂಗಳೂರು ಜಿಲ್ಲೆಯ ಇಬ್ಬರು ಮೃತರ ವಾರಸುದಾರರ ಕುಟುಂಬಕ್ಕೆ ಪರಿಹಾರ ಜಮೆ ಮಾಡಲಾಗುತ್ತದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.