ಚಾಮರಾಜನಗರ:ಶಿಕ್ಷಕರೊಬ್ಬರಿಗೆ ಪೆಪ್ಪರ್ ಸ್ಪ್ರೇ ಹೊಡೆದು ಹಾಡಹಗಲೇ 2 ಲಕ್ಷ ರೂ. ದರೋಡೆ ಮಾಡಿರುವ ಘಟನೆ ನಗರದ ಭುವನೇಶ್ವರಿ ವೃತ್ತದ ಸಮೀಪ ನಡೆದಿದೆ.
ಚಾಮರಾಜನಗರ ತಾಲೂಕಿನ ಕಾಳನಹುಂಡಿಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ನಗರದ ಹೌಸಿಂಗ್ ಬೋರ್ಡ್ ನಿವಾಸಿ ಶಿವಕುಮಾರ್ ಮನೆ ಕಟ್ಟಿಸುವ ಸಲುವಾಗಿ ಇಟ್ಟಿದ್ದ ಒಂದು ಲಕ್ಷ ರೂ. ಹಣ ಮತ್ತು ಕೆನರಾ ಬ್ಯಾಂಕಿನಲ್ಲಿ ಒಂದು ಲಕ್ಷ ರೂ. ಹೌಸಿಂಗ್ ಲೋನ್ ಹಣ ಡ್ರಾ ಮಾಡಿಕೊಂಡು ಬರುತ್ತಿದ್ದರು. ತಾವು ತಂದಿದ್ದ ಬ್ಯಾಗ್ನಲ್ಲಿ 2 ಲಕ್ಷ ರೂ. ಹಾಕಿಕೊಂಡು ಬಸ್ಗಾಗಿ ಕಾಯುತ್ತಿದ್ದರು.