ಚಾಮರಾಜನಗರ: ಮಹಾಮಳೆಗೆ ಗಡಿಜಿಲ್ಲೆ ಚಾಮರಾಜನಗರದಲ್ಲಿ ಇಂದು ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ಜಿಲ್ಲೆಯಲ್ಲಿ ಮಳೆಗೆ ಮೂವರು ಸಾವನ್ನಪ್ಪಿದಂತಾಗಿದೆ. ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ರೇವಣ್ಣ (46) ಮೃತ ರೈತ. ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಅವರು ಸಾವನ್ನಪ್ಪಿದ್ದಾರೆ. ತಕ್ಷಣ ಯಳಂದೂರು ಆಸ್ಪತ್ರೆಗೆ ದಾಖಲು ಮಾಡಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಹನೂರು ತಾಲೂಕಿನ ಮಿಣ್ಯಂ ಗ್ರಾಮದ ತೋಟದಲ್ಲಿದ್ದ ಮಾದಪ್ಪ (64) ಸಿಡಿಲಿನ ಬಡಿತಕ್ಕೆ ಮೃತಪಟ್ಟಿರುವ ದುರ್ದೈವಿ. ಈತ ತೋಟದ ಮನೆಯಲ್ಲಿ ವಾಸವಿದ್ದು, ಎಂದಿನಂತೆ ಕುರಿ ಕಾಯುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಈ ವೇಳೆ ಮಾದಪ್ಪ ಹಾಗೂ 6 ಕುರಿಗಳು ಸಾವನ್ನಪ್ಪಿವೆ. ಸೂಕ್ತ ಪರಿಹಾರ ಒದಗಿಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.