ಗುಂಡ್ಲುಪೇಟೆ : ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮುದುಮಲೈ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ದಾಳಿಯಿಂದ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ.
ಮೇಕೆ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿ : ಆದಿವಾಸಿ ಮಹಿಳೆ ಸಾವು - Tiger attack on woman
ಮೇಕೆ ಮೇಯಿಸುತ್ತಿದ್ದ ಮಹಿಳೆಯ ಮೇಲೆ ಹುಲಿ ದಾಳಿ ಮಾಡಿ ಕೊಂದ ಘಟನೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮುದುಮಲೈ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜರುಗಿದೆ.
ಮಹಿಳೆ ಮೇಲೆ ಹುಲಿ ದಾಳಿ
ಮೃತ ಮಹಿಳೆಯನ್ನು ಕುರುಂಬೂರು ಹಾಡಿಯ ಆದಿವಾಸಿ ಎಂದು ಗುರುತಿಸಲಾಗಿದೆ. ಮುದುಮಲೈಯ ಸಿಂಗಾರ ವಲಯದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಪರಿಶೀಲಿಸಿ ಮೃತಳ ದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಿದ್ದಾರೆ.