ಚಾಮರಾಜನಗರ:ಅನ್ಲಾಕ್ 3.0ನ ಪರಿಷ್ಕೃತ ಮಾರ್ಗಸೂಚಿಯಂತೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ದರ್ಶನದ ಸಮಯ ವಿಸ್ತರಣೆಯಾಗಿದ್ದು ವಾಸ್ತವ್ಯಕ್ಕೂ ಅವಕಾಶ ನೀಡಲಾಗಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಇದ್ದ ದರ್ಶನದ ಸಮಯವನ್ನು ಬೆಳಗ್ಗೆ 5 ರಿಂದ ರಾತ್ರಿ 9ರ ವರೆಗೆ ವಿಸ್ತರಿಸಲಾಗಿದೆ. ದರ್ಶನಕ್ಕೆ ಬರುವ ಭಕ್ತಾಧಿಗಳಿಗಾಗಿ ವಾಸ್ತವ್ಯಕ್ಕಿದ್ದ ನಿರ್ಬಂಧವನ್ನು ಇಂದಿನಿಂದ ತೆರವುಗೊಳಿಸಲಾಗಿದೆ. ಇನ್ನು ಮುಂದೆ ಬೆಟ್ಟದಲ್ಲಿನ ವಸತಿಗೃಹ, ಲಾಡ್ಜ್ಗಳಲ್ಲಿ ತಂಗಬಹುದಾಗಿದೆ ಎಂದು ತಿಳಿಸಿದ್ದಾರೆ.