ಚಾಮರಾಜನಗರ: ಮಡಹಳ್ಳಿ ಬಿಳಿಕಲ್ಲು ಕ್ವಾರಿ ಕುಸಿತ ಪ್ರಕರಣದಿಂದ ಎಚ್ಚೆತ್ತು ಸುರಕ್ಷತಾ ಕ್ರಮಗಳನ್ನು ಕೈಗೊಂಡು ನಿಯಮಾನುಸಾರವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆಯೇ ಎಂದು ಪರಿಶೀಲಿಸಲು 8 ತಂಡಗಳನ್ನು ರಚಿಸಿ ಈ ಬಗ್ಗೆ ವರದಿ ಸಲ್ಲಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ದಕ್ಷಿಣ ವಲಯದ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಹಿರಿಯ ಭೂ ವಿಜ್ಞಾನಿಗಳಾದ ಕೃಷ್ಣಮೂರ್ತಿ, ಎಚ್.ವಿ.ವಿಶ್ವನಾಥ್ ಹಾಗೂ ಚೊಕ್ಕಾ ರೆಡ್ಡಿ, ಡಾ.ಮಾಲತಿ, ಬಿ.ಆರ್.ಮಮತಾ, ರಾಮಲಿಂಗಯ್ಯ, ಧರಣೇಶ್ ಮತ್ತು ಪ್ರಕಾಶ್ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ.
ಈ ಅಧಿಕಾರಿಗಳು ದಕ್ಷಿಣ ವಲಯ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿನ ಕಲ್ಲು ಗಣಿಗಾರಿಕೆ ಪ್ರದೇಶಗಳ ತಪಾಸಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ. ನಿಯೋಜನೆ ಮಾಡಿರುವ ಅಧಿಕಾರಿಗಳು ತಮ್ಮ ಕರ್ತವ್ಯದಿಂದ ಬಿಡುಗಡೆಗೊಂಡು ಚಾಮರಾಜನಗರದ ಉಪನಿರ್ದೇಶಕರ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.
ಮಡಹಳ್ಳಿ ಕ್ವಾರಿಯಲ್ಲಿ ಸಿಲುಕಿರುವ ಇಬ್ಬರು ಕಾರ್ಮಿಕರ ಮೃತದೇಹಗಳನ್ನು ಮೇಲಕ್ಕೆತ್ತಲು ರಕ್ಷಣಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ.
ಇದನ್ನೂ ಓದಿ :ಉಕ್ರೇನ್‌ನಿಂದ ಹುಬ್ಬಳ್ಳಿಗೆ ಆಗಮಿಸಿದ ವಿದ್ಯಾರ್ಥಿನಿ ಕೊರಳಿಗೆ ಹಾರ ಹಾಕಿ, ಸಿಹಿ ತಿನ್ನಿಸಿ ಬರಮಾಡಿಕೊಂಡ ಸಿಎಂ