ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸೂರ್ಯಕಾಂತಿ ಫಸಲು ನಳನಳಿಸುತ್ತಿದ್ದು ಹೂವಿನ ಚಂದಕ್ಕೆ ಪ್ರವಾಸಿಗರು ಮಾರು ಹೋಗಿ ಸೆಲ್ಫಿ ತೆಗೆಯಲು ತೋಟಕ್ಕೆ ಧಾವಿಸುತ್ತಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಹಂಗಳ ಮತ್ತು ಭೀಮನಭೀಡು, ಕಣ್ಣೇಗಾಲ ಮಧ್ಯೆ ಹಾದು ಹೋಗುವ ಎರಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೇರಳ, ತಮಿಳುನಾಡಿನ ಪ್ರವಾಸಿಗರರು ಸೂರ್ಯಕಾಂತಿ ಜಮೀನಿಗೆ ಭೇಟಿ ನೀಡಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.
ಪ್ರವಾಸಿಗರ ಸೆಲ್ಫಿ ಸಂಭ್ರಮಕ್ಕೆ ಕೆಲ ಜಮೀನು ಮಾಲೀಕರು ತೊಂದರೆ ಅನುಭವಿಸಿದರೇ ಮತ್ತೆ ಕೆಲವರು ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ, ಗಿಡಗಳನ್ನು ತುಳಿದು ಹಾಳು ಮಾಡಬೇಡಿ, ಹೂವುಗಳನ್ನು ಕೀಳಬೇಡಿ ಎಂದು ಕೆಲ ರೈತರು ಮನವಿ ಮಾಡಿಕೊಳ್ಳುತ್ತಿದ್ದಾರೆ.