ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ವೆಸ್ಲಿ ಸೇತುವೆ ಬಳಿ ಅಪಾಯವನ್ನು ಲೆಕ್ಕಿಸದೆ ಪ್ರವಾಸಿಗರು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.
ಮಳೆಯ ಆರ್ಭಟಕ್ಕೆ ಎರಡು ವರ್ಷಗಳ ಹಿಂದೆಯೇ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿತ್ತು. ಉಳಿದ ಭಾಗದ ಮೇಲೆ ಓಡಾಟಕ್ಕೆ ನಿರ್ಬಂಧವಿದ್ದರೂ ಇದನ್ನು ಲೆಕ್ಕಿಸದೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಮೋಜು ಮಾಡುತ್ತಿದ್ದಾರೆ. ಪ್ರವಾಸಿ ಸ್ಥಳಗಳಲ್ಲಿ ತಾಲೂಕು ಆಡಳಿತ ಎಚ್ಚರಿಕೆ ಫಲಕ ಹಾಕಿದ್ದರೂ ನಿರ್ಲಕ್ಷಿಸಿ ನೀರಿಗಿಳಿಯುತ್ತಿದ್ದಾರೆ.