ಚಾಮರಾಜನಗರ: ಜಮೀನಿಗೆ ತೆರಳುತ್ತಿದ್ದಾಗ ಹಳ್ಳಕ್ಕೆ ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದಲ್ಲಿ ನಡೆದಿದೆ.
ಜಮೀನಿಗೆ ತೆರಳುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಗ್ರಾ.ಪಂ ಸದಸ್ಯ ಸಾವು, ಓರ್ವನಿಗೆ ಗಾಯ - Tractor pulti in Chamarajanagar news
ಚಾಮರಾಜನಗರದಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ. ಉಳುಮೆಗೆ ತೆರಳುವಾಗ ಹಳ್ಳವೊಂದರ ಬಳಿ ಘಟನೆ ಸಂಭವಿಸಿದೆ.
ಜಮೀನಿಗೆ ತೆರಳುವಾಗ ಟ್ರ್ಯಾಕ್ಟರ್ ಪಲ್ಟಿ
ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಗ್ರಾ.ಪಂ ಸದಸ್ಯ ಶನಿದೇವರ ಮೂರ್ತಿ(43) ಮೃತಪಟ್ಟವರು. ಟ್ರ್ಯಾಕ್ಟರ್ನಲ್ಲಿ ಕುಳಿತಿದ್ದ ಅದೇ ಗ್ರಾಮದ ರಾಮು ಎಂಬ ಯುವಕ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಉಳುಮೆಗೆ ತೆರಳುವಾಗ ಹಳ್ಳವೊಂದರ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಅಕ್ಕಪಕ್ಕದ ಜಮೀನಿನವರು ದೌಡಾಯಿಸಿ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.