ಕರ್ನಾಟಕ

karnataka

ETV Bharat / state

ಹೊಟ್ಟೆನೋವು ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ : ಚಿಕಿತ್ಸೆ ಫಲಕಾರಿಯಾಗದೆ ಅಪ್ರಾಪ್ತೆ ಸಾವು - ಕೊಳ್ಳೇಗಾಲದಲ್ಲಿ ಅಪ್ರಾಪ್ತೆ ಸಾವು

ನವೆಂಬರ್​ 10ರಂದು ರಾತ್ರಿ ಹೊಟ್ಟೆನೋವು ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅಪ್ರಾಪ್ತೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ..

ಚಿಕಿತ್ಸೆ ಫಲಕಾರಿಯಾಗದೆ ಅಪ್ರಾಪ್ತೆ ಸಾವು
ಚಿಕಿತ್ಸೆ ಫಲಕಾರಿಯಾಗದೆ ಅಪ್ರಾಪ್ತೆ ಸಾವು

By

Published : Nov 13, 2021, 10:09 PM IST

Updated : Nov 13, 2021, 10:44 PM IST

ಕೊಳ್ಳೇಗಾಲ :ಹೊಟ್ಟೆನೋವು‌ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅಪ್ರಾಪ್ತೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ‌ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ತಾಲೂಕಿನ ಹರಳೆ ಗ್ರಾಮದ ಸಿದ್ದರಾಜು ಪುತ್ರಿ ನಿಶ್ಚಿತಾ(17) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಅಪ್ರಾಪ್ತೆ. ನ.10ರಂದು ರಾತ್ರಿ ಹೊಟ್ಟೆನೋವು ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ್ದಳು ಎನ್ನಲಾಗಿದೆ.

ಬಳಿಕ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅಪ್ರಾಪ್ತೆ ಅಸುನೀಗಿದ್ದಾಳೆ. ಈ‌ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Nov 13, 2021, 10:44 PM IST

ABOUT THE AUTHOR

...view details