ಚಾಮರಾಜನಗರ:ಗುಂಡ್ಲುಪೇಟೆ ತಾಲ್ಲೂಕಿನ ಬೇರಾಂಬಡಿ, ಚೆನ್ನಮಲ್ಲಿಪುರ,ಹೊಂಗಳ್ಳಿ, ಬರಗಿ, ದೇಶಿಪುರ, ಆಲತ್ತೂರು ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಬೆಳೆದ ಈರುಳ್ಳಿ ಬೆಳೆಗಳಿಗೆ ಟ್ವಿಸ್ಟರ್ ಶೀಲಿಂಧ್ರ ರೋಗ ಕಾಣಿಸಿಕೊಂಡಿರುವುದರಿಂದ ರೋಗ ತಜ್ಞರು ಮತ್ತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆದ್ದಾರೆ.
ಈರುಳ್ಳಿ ಬೆಳೆಗೆ ಟ್ವಿಸ್ಟರ್ ಶೀಲಿಂಧ್ರ ರೋಗ..ಪರಿಶೀಲನೆ ನಡೆಸಿದ ರೋಗ ತಜ್ಞರು
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬೆಳೆದ ಈರುಳ್ಳಿ ಬೆಳೆಗಳಿಗೆ ಟ್ವಿಸ್ಟರ್ ಶೀಲಿಂಧ್ರ ರೋಗ ಕಾಣಿಸಿಕೊಂಡಿರುವುದರಿಂದ ರೋಗ ತಜ್ಞರು ಮತ್ತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ರು.
ಈ ರೋಗವು ಬಿತ್ತನೆಯಾದ 35 ರಿಂದ 40 ದಿನದ ಅನುಪಾಸಿನಲ್ಲಿ ಕಾಣಿಸಿಕೊಳ್ಳಲಿದ್ದು,ರೋಗವು ಹೆಚ್ಚಾದರೆ ಜಮೀನಿನಲ್ಲಿ ಬೆಳೆದಿರುವ ಎಲ್ಲಾ ಬೆಳೆಗಳು ನಾಶವಾಗುತ್ತದೆ. ಸತತವಾಗಿ ಬೀಳುತ್ತಿರುವ ಮಳೆ ಹಾಗೂ ಮೋಡ ಕವಿದ ವಾತವರಣದಿಂದ ಹಾಗೂ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗುತ್ತಿರುವುದರಿಂದ ಈ ರೋಗ ಕಾಣಿಸಿಕೊಳ್ಳುತ್ತಿದೆ. ಈ ರೋಗಕ್ಕೆ ತುತ್ತಾದ ಎಲೆಗಳು ಮತ್ತು ಕಾಂಡದ ಭಾಗವು ತಿರುಚಿಕೊಂಡಂತಾಗಿ ನೆಲಕ್ಕೆ ಬೀಳುತ್ತದೆ. ರೋಗದ ತೀವ್ರತೆ ಹೆಚ್ಚಾದರೆ ಸುಟ್ಟಂತಾಗಿ ಬೆಳವಣಿಗೆ ಕುಂಠಿತವಾಗುತ್ತದೆ. ಈ ರೋಗವು ಗಾಳಿಯ ಮೂಲಕ ಹರಡುತ್ತಿದ್ದು,ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಮಣ್ಣಿನಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು ಎಂದು ತಜ್ಞರು ತಿಳಿಸಿದ್ದಾರೆ.
ರೋಗದ ನಿರ್ವಹಣೆಗೆ 1 ಗ್ರಾಂ ಥಿಯೋಪಿನೈಟ್ ಮಿಥೈಲ್ನ್ನು ಒಂದು ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಣೆ ಮಾಡಬೇಕು. ಬಳಿಕ 5 ರಿಂದ 6 ದಿನದ ನಂತರ ಬೋರಾನ್ ಜಿಂಕ್ ಮತ್ತು ಮ್ಯಾಂಗನೀಸ್ ಲಘು ಪೋಷಕಾಂಶ 2 ಗ್ರಾಂ ಪ್ರತಿ ಲೀಟರ್ಗೆ ಬೆರಸಿ ಸಿಂಪಡಣೆ ಮಾಡಬೇಕು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ತಿಳಿಸಿದರು. ರೋಗದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರದ ರೋಗ ತಜ್ಞ ಡಾ.ಬಿ.ಪೊಂಪನಗೌಡ (7406 152815) ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನ ರೈತರು ಸಂಪರ್ಕ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.