ಕರ್ನಾಟಕ

karnataka

ETV Bharat / state

ಚಾಮರಾಜನಗರ: ಬೈಕ್​ಗೆ ಟೆಂಪೋ ಟ್ರಾವೆಲರ್ ಡಿಕ್ಕಿ, ಇಬ್ಬರು ದುರ್ಮರಣ - ಚಾಮರಾಜನಗರ ಜಿಲ್ಲೆಯಲ್ಲಿ ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಇಬ್ಬರು ಸಾವು

ಚಾಮರಾಜನಗರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರು ಎಳನೀರು ವ್ಯಾಪಾರಿಗಳಾಗಿದ್ದು, ವ್ಯವಹಾರ ಕುದುರಿಸಿ ಊರಿಗೆ ತೆರಳುವಾಗ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದೆ.

Two die in road accident in Chamarajanagar
ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಇಬ್ಬರು ಸಾವು

By

Published : Nov 6, 2020, 11:02 AM IST

ಚಾಮರಾಜನಗರ: ಬೈಕ್ ಹಾಗೂ ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಮದ್ದೂರಿನಲ್ಲಿ ತಡರಾತ್ರಿ ನಡೆದಿದೆ.

ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಆನಂದ್(28) ಮತ್ತು ಆರ್.ಎಸ್. ದೊಡ್ಡಿ ಗ್ರಾಮದ ಸಿದ್ದರಾಜು(28) ಮೃತರು. ಇವರು ಎಳನೀರು ವ್ಯಾಪಾರಿಗಳಾಗಿದ್ದು, ವ್ಯವಹಾರ ಕುದುರಿಸಿ ಊರಿಗೆ ಹಿಂದಿರುಗುವವೇಳೆ ಬೆಂಗಳೂರಿನಿಂದ ಚಾಮರಾಜನಗರಕ್ಕೆ ಬರುತ್ತಿದ್ದ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದೆ ಎನ್ನಲಾಗ್ತಿದೆ.

ಟಿಟಿಯಲ್ಲಿ 8 ಮಂದಿ ಇದ್ದರು ಎಂದು ತಿಳಿದುಬಂದಿದ್ದು, ಘಟನೆ ನಡೆದ ಕೂಡಲೇ ಚಾಲಕ ಪರಾರಿಯಾಗಿದ್ದಾನೆ. ಬೈಕ್ ಸವಾರ ಆನಂದ್ ಸ್ಥಳದಲ್ಲೇ ಮೃತಪಟ್ಟರೇ ಸಿದ್ದರಾಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details