ಚಾಮರಾಜನಗರ:ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಹೊರವಲಯದ ಮಾದಾಪುರ ಸಮೀಪ ನಡೆದಿದೆ. ಚಾಮರಾಜನಗರ ತಾಲೂಕಿನ ಕಟ್ನವಾಡಿ ಗ್ರಾಮದ ಶಿವಮೂರ್ತಿ(46) ಹಾಗೂ ಮಹಾದೇವಪ್ಪ(52) ಮೃತ ದುರ್ದೈವಿಗಳು.
ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಅಡ್ಡ ಬಂದ ನಾಯಿ: ಬೈಕಿನಿಂದ ಬಿದ್ದು ಇಬ್ಬರು ಸಾವು - bike accident in chamrajnagar etv bharat
ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ರಸ್ತೆಗೆ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಲು ಹೋಗಿ ಬೈಕಿನಿಂದ ಕೆಳ ಬಿದ್ದ ಇಬ್ಬರು ಸವಾರರು ಮೃತಪಟ್ಟಿದ್ದಾರೆ.
ಅಪಘಾತ
ಬೈಕಿನಲ್ಲಿ ಇವರಿಬ್ಬರು ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಮಾದಾಪುರ ಬಳಿ ನಾಯಿ ಅಡ್ಡ ಬಂದಿದ್ದರಿಂದ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಯಾತಪ್ಪಿ ಬಿದ್ದಿದ್ದು, ಶಿವಮೂರ್ತಿ ಎನ್ನುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಮಹಾದೇವಪ್ಪ ಎನ್ನುವವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಚಾಮರಾಜನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಲಾರಿಗಳ ನಡುವೆ ಅಪಘಾತ, ಕೂದಲೆಳೆ ಅಂತರದಲ್ಲಿ ಪಾರಾದ ರೈತ: ಸಿಸಿಟಿವಿ ವಿಡಿಯೋ