ಚಾಮರಾಜನಗರ: ಕಬ್ಬು ತುಂಬಿದ ಲಾರಿಯೊಂದು ಮಗುಚಿಬಿದ್ದು ಪಾದಚಾರಿಗಳಿಬ್ಬರು ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಶನಿವಾರ ಸಂಜೆ ನಡೆದಿದೆ. ಉತ್ತರ ಪ್ರದೇಶ ಮೂಲದ ಅತುಲ್ (17), ಮಯೂರ್ (17) ಮೃತರು.
ಜೀವನೋಪಾಯಕ್ಕಾಗಿ ಬಟ್ಟೆ ವ್ಯಾಪಾರ ಮಾಡಲು ಬಂದಿದ್ದ ಇವರಿಬ್ಬರು ತಿರುವಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಇವರ ಮೇಲೆಯೇ ಉರುಳಿ ಪಲ್ಟಿಯಾಗಿದೆ. ಅವೈಜ್ಞಾನಿಕ ರಸ್ತೆ ನಿರ್ಮಾಣ ಒಂದೆಡೆಯಾದರೆ, ಚಾಲಕನ ಅತಿಯಾದ ವೇಗದ ಚಾಲನೆಯೇ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಚಾಮರಾಜನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.