ಚಾಮರಾಜನಗರ:ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬದನಗುಪ್ಪೆ-ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ.
ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದ ಅಶೋಕ್ (32) ಹಾಗೂ ಮಹೇಶ್ (25) ಮೃತಪಟ್ಟವರು. ನಂಜನಗೂಡಿನಿಂದ ಹೊರಟಿದ್ದ ಬೈಕ್ಗೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಇಬ್ಬರು ಅಸುನೀಗಿದ್ದಾರೆ.