ಕರ್ನಾಟಕ

karnataka

ETV Bharat / state

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಅಪಹರಣ: ಇಬ್ಬರ ಬಂಧನ

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಅಪಹರಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ಪುಸಲಾಯಿಸಿ ಅಪಹರಣ ಮಾಡಿದ್ದ ಇಬ್ಬರು ಆರೋಪಿಗಳು ಜೈಲುಪಾಲಾಗಿದ್ದಾರೆ.

kollegal
ಕೊಳ್ಳೇಗಾಲ

By

Published : Jan 20, 2021, 8:53 PM IST

ಕೊಳ್ಳೇಗಾಲ(ಚಾಮರಾಜನಗರ): ಪ್ರೀತಿಸಿ ಮದುವೆಯಾಗುವುದಾಗಿ ಪುಸಲಾಯಿಸಿ 17 ವರ್ಷದ ಬಾಲಕಿಯನ್ನು ಅಪಹರಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಸತ್ತೇಗಾಲ ಗ್ರಾಮದ ಸಂಜಯ್(22) ಹಾಗೂ ಸುಜಿತ್(22) ಬಂಧಿತ ಆರೋಪಿಗಳು.

ಪ್ರಕರಣದ ಹಿನ್ನಲೆ:

ಜ. 10ರಂದು 17 ವರ್ಷದ ನನ್ನ ಮಗಳು ಕಾಣೆಯಾಗಿದ್ದಾಳೆಂದು ಬಾಲಕಿಯ ತಂದೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ಸಂಬಂಧ ಎಚ್ಚೆತ್ತ ಪೊಲೀಸರು ತನಿಖೆ ಕೈಗೊಂಡು ಮಡಿಕೇರಿಯ ಬಳಿ ಇದ್ದ ಬಾಲಕಿಯನ್ನು ಪತ್ತೆ ಹಚ್ಚಿ ಕರೆತಂದಿದ್ದಾರೆ. ಈಕೆಯ ಜೊತೆಯಲ್ಲಿದ್ದ ಸಂಜಯ್‌ ಎಂಬಾತನನ್ನು ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದಾಗ ಬಾಲಕಿಯನ್ನು ಪ್ರೀತಿಸುತ್ತಿದ್ದು, ಆಕೆಯನ್ನು ಮದುವೆಯಾಗುವುದಾಗಿ ಹೇಳಿ ಅಪರಿಸಿದ್ದೇನೆ ಎಂದು ತಿಳಿಸಿದ್ದಾನೆ. ಅಪಹರಣಕ್ಕೆ ತನ್ನ ಸ್ನೇಹಿತ ಸುಜಿತ್ ಸಹಕರಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ:ಬೆಳಗಾವಿ: ಆಸ್ತಿಗಾಗಿ ತಮ್ಮನ ಮಗನನ್ನೇ ಹತ್ಯೆ ಮಾಡಿದ ಪಾಪಿ ದೊಡ್ಡಪ್ಪ!

ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.

ABOUT THE AUTHOR

...view details