ಚಾಮರಾಜನಗರ:ಗುಂಡ್ಲುಪೇಟೆ ಪಟ್ಟಣದ ಸೈಂಟ್ ಜಾನ್ಸ್ ಶಾಲೆಯ ಬಳಿವೇಗವಾಗಿ ಚಲಿಸುತ್ತಿದ್ದ ಎರಡು ಬೈಕ್‍ಗಳ ನಡುವೆ ಅಪಘಾತ ನಡೆದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಜಕ್ಕಹಳ್ಳಿ ಗ್ರಾಮದ ಚಂದ್ರು (32), ಲಕ್ಕೂರು ಗ್ರಾಮದ ಅನಿಲ್ (26) ಮೃತರು. ಬೈಕ್‍ನಲ್ಲಿದ್ದ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹಗಳನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ವೇಗದೂತ ಬೈಕ್‍ಗಳ ಮುಖಾಮುಖಿ ಡಿಕ್ಕಿ: ಗುಂಡ್ಲುಪೇಟೆಯಲ್ಲಿ ಇಬ್ಬರು ಸವಾರರು ಸಾವು - kannada top news
ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವೇಗವಾಗಿ ಚಲಿಸುತ್ತಿದ್ದ ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು