ಚಾಮರಾಜನಗರ: ಸಮಾಜದಲ್ಲಿ ರೇಪ್ಗಳು ನಡೆಯುತ್ತವೆ, ಏನು ಮಾಡಲಾಗಲ್ಲ ಎಂದು ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ.
ಇವೆಲ್ಲವೂ ಸಮಾಜದಲ್ಲಿ ನಡೆಯುತ್ತವೆ, ನಡೆಯಬಾರದು ಆದರೂ ನಡೆಯುತ್ತದೆ, ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದು, ಇದರ ಬಗ್ಗೆ ಹೆಚ್ಚು ಮಾತನಾಡಲು ತಾನು ಗೃಹ ಸಚಿವನಲ್ಲ ಎಂದರು.