ಚಾಮರಾಜನಗರ:ಜಿಲ್ಲೆಯಲ್ಲಿ 24 ಗಂಟೆಯಲ್ಲಿ 24 ಕೊರೊನಾ ಸೋಂಕಿತರು ಮೃತಪಟ್ಟಿರುವ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಿರಂತರ ಸಾವು-ನೋವುಗಳ ಜವಾಬ್ದಾರಿಯನ್ನು ಯಡಿಯೂರಪ್ಪ ಹೊರಬೇಕು. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು. ಅಷ್ಟೇ ಅಲ್ಲದೇ ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.