ಕರ್ನಾಟಕ

karnataka

ETV Bharat / state

ಚಾಮರಾಜನಗರ ಕಡೆಗಣನೆಗೆ ಖಾಲಿ ಕೊಡ ಹಿಡಿದು ವಾಟಾಳ್ ಪ್ರತಿಭಟನೆ..

ಪರೀಕ್ಷೆ ನಡೆಸದೆ ಎಸ್ಎಸ್ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಬೇಕು. ಯಾವುದೇ ಕಾರಣಕ್ಕೂ ಶಾಲೆಗಳನ್ನು ಪ್ರಾರಂಭ ಮಾಡಬಾರದು. ಒಂದು ವೇಳೆ ಮಾಡಿದರೆ ವಿದ್ಯಾರ್ಥಿ ಜೀವಕ್ಕೆ ಗ್ಯಾರಂಟಿ ಕೊಟ್ಟು ಪ್ರತಿ ವಿದ್ಯಾರ್ಥಿ ಹೆಸರಿನಲ್ಲಿ ಒಂದು ಕೋಟಿ ರೂ. ಠೇವಣಿ ಇಡಬೇಕು..

vatal-nagaraj
ವಾಟಾಳ್ ನಾಗರಾಜ್

By

Published : Jun 23, 2021, 6:13 PM IST

ಚಾಮರಾಜನಗರ :ರಾಜ್ಯ ಸರ್ಕಾರ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿ ಇಂದು ಮಧ್ಯಾಹ್ನ ಕನ್ನಡಪರ ಚಳವಳಿಗಾರ ವಾಟಾಳ್ ನಾಗರಾಜ್ ಖಾಲಿ ಕೊಡ ಹಿಡಿದು ಪ್ರತಿಭಟಿಸಿದರು. ಚಾಮರಾಜೇಶ್ವರ ದೇಗುಲ ಆವರಣದಲ್ಲಿ ಖಾಲಿ ಕೊಡ ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಅವರು, ಚಾಮರಾಜನಗರ ಜಿಲ್ಲೆಯೂ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಸಿಎಂ ಬಿಎಸ್​ವೈ ವಿರುದ್ಧ ಆಕ್ರೋಶ ಹೊರ ಹಾಕಿದರು.

ಕೂಡಲೇ ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ 5 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡಬೇಕು. ಚಾಮರಾಜನಗರಕ್ಕೆ ಸಿಎಂ ಬರಬೇಕು ಎಂದು ಅವರು ಒತ್ತಾಯಿಸಿದರು. ಇದೇ ವೇಳೆ, ಪರೀಕ್ಷೆ ನಡೆಸದೆ ಎಸ್ಎಸ್ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಬೇಕು.

ಯಾವುದೇ ಕಾರಣಕ್ಕೂ ಶಾಲೆಗಳನ್ನು ಪ್ರಾರಂಭ ಮಾಡಬಾರದು. ಒಂದು ವೇಳೆ ಮಾಡಿದರೆ ವಿದ್ಯಾರ್ಥಿ ಜೀವಕ್ಕೆ ಗ್ಯಾರಂಟಿ ಕೊಟ್ಟು ಪ್ರತಿ ವಿದ್ಯಾರ್ಥಿ ಹೆಸರಿನಲ್ಲಿ ಒಂದು ಕೋಟಿ ರೂ.ಠೇವಣಿ ಇಡಬೇಕೆಂದು ಆಗ್ರಹಿಸಿದರು.

ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಈವರೆಗೂ ಯಾರ ಮೇಲೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿ, ಡೀನ್, ಡಿಹೆಚ್ಒ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಓದಿ:ಕಾಲೇಜುಗಳ ಆರಂಭಕ್ಕೆ ಮುಹೂರ್ತ ಫಿಕ್ಸ್​.. ಸಚಿವ ಅಶ್ವತ್ಥ್​ ನಾರಾಯಣ್​ ಹೇಳಿದ್ದೇನು?

ABOUT THE AUTHOR

...view details