ಕರ್ನಾಟಕ

karnataka

ETV Bharat / state

ಪಶು ವೈದ್ಯೆ ಅತ್ಯಾಚಾರ ಪ್ರಕರಣ: ಗಲ್ಲು ಶಿಕ್ಷೆಗೆ ಆಗ್ರಹಿಸಿದ ಹಿಂದೂ ಜಾಗರಣಾ ವೇದಿಕೆ - ಹೈದ್ರಾಬಾದ್ ನಲ್ಲಿ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ

ಹೈದ್ರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

kn_cnr_04_protest_avb_7202614
ಪಶು ವೈದ್ಯೆ ಅತ್ಯಾಚಾರ ಪ್ರಕರಣ: ಗಲ್ಲು ಶಿಕ್ಷೆಗೆ ಆಗ್ರಹಿಸಿದ ಹಿಂದೂ ಜಾಗರಣಾ ವೇದಿಕೆ

By

Published : Nov 30, 2019, 11:35 PM IST

ಚಾಮರಾಜನಗರ: ಹೈದ್ರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಶು ವೈದ್ಯೆ ಅತ್ಯಾಚಾರ ಪ್ರಕರಣ: ಗಲ್ಲು ಶಿಕ್ಷೆಗೆ ಆಗ್ರಹಿಸಿದ ಹಿಂದೂ ಜಾಗರಣಾ ವೇದಿಕೆ

ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತರು ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ತೆಲಂಗಾಣದ ಗೃಹಸಚಿವರ ಬೇಜವಾಬ್ದಾರಿ ಹೇಳಿಕೆ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಮರುಕಳಿಸುತ್ತಲೇ ಇದ್ದು, ದಿನಕಳೆದಂತೆ ಪ್ರತಿಭಟನೆ ಕಾವು ಕಡಿಮೆಯಾಗುತ್ತಿದೆ.‌ ಅಮಾನವೀಯ ದುಷ್ಕೃತ್ಯ ಮರುಕಳಿಸದಂತೆ ತಡೆಯಲು ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನು ತರಬೇಕೆಂದು ಹಿಂದೂಪರ ಕಾರ್ಯಕರ್ತ ಪೃಥ್ವಿ ಒತ್ತಾಯಿಸಿದರು.

ABOUT THE AUTHOR

...view details