ಚಾಮರಾಜನಗರ: ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದಿರುವುದರಿಂದ ಮಹಿಳೆಯ ಶವವನ್ನು ಗ್ರಾಮ ಪಂಚಾಯತ್ ಕಚೇರಿ ಮುಂಭಾಗವೇ ಹೂತು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ(48) ಎಂಬ ಮಹಿಳೆಯ ಶವವನ್ನು ಗ್ರಾಪಂ ಕಚೇರಿ ಮುಂಭಾಗವೇ ಹೂತುಹಾಕಿ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.
ಮಾಂಬಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಕಾಲುವೆಯನ್ನು ದಾಟಿ ಹೋಗಬೇಕಿದ್ದು, ಸುವರ್ಣಾವತಿ ಜಲಾಶಯದ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ಅಸಾಧ್ಯ ಪರಿಸ್ಥಿತಿ ನಿರ್ಮಾಣವಾಗಿದೆ.