ಕರ್ನಾಟಕ

karnataka

ETV Bharat / state

ನಿರ್ಮಾಣವಾದ ಎರಡೇ ದಿನಕ್ಕೆ ಕಿತ್ತು ಹೋದ ರಸ್ತೆ: ಗ್ರಾಮಸ್ಥರ ಆಕ್ರೋಶ...

ಗುಂಡ್ಲುಪೇಟೆ ತಾಲ್ಲೂಕಿನ ತೊಂಡವಾಡಿ ಗ್ರಾಮಕ್ಕೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಿಂದ ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಸ್ತೆ ಎರಡೇ ದಿನಕ್ಕೆ ಕಿತ್ತುಹೋಗಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

Gundlupete
ಕಿತ್ತು ಹೋದ ರಸ್ತೆ

By

Published : Aug 30, 2020, 7:55 PM IST

ಗುಂಡ್ಲುಪೇಟೆ: ತಾಲ್ಲೂಕಿನ ತೊಂಡವಾಡಿ ಗ್ರಾಮಕ್ಕೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಿಂದ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ರಸ್ತೆ ಎರಡೇ ದಿನಕ್ಕೆ ಕಿತ್ತುಹೋಗಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಸ್ತೆ ಎರಡೇ ದಿನಕ್ಕೆ ಕಿತ್ತುಹೋಗಿರುವುದಕ್ಕೆ ಗ್ರಾಮಸ್ಥರ ಆಕ್ರೋಶ

ನಂಜನಗೂಡು ಮೂಲದ ಗುತ್ತಿಗೆದಾರ ಕಳಪೆ ಕಾಮಗಾರಿ ಮಾಡಿದ್ದಾನೆ. ಹಣ ಮಾಡುವ ಉದ್ದೇಶದಿಂದ ರಾಜಕೀಯ ವ್ಯಕ್ತಿಗಳ ಜೊತೆ ಶಾಮೀಲಾಗಿ ಈ ರೀತಿಯಲ್ಲಿ ಕಳಪೆಯಾಗಿ ಕಾಮಗಾರಿ ಮಾಡಿದ್ದಾನೆ ಎಂದು ಆರೋಪಿಸಿದರು. ರಸ್ತೆ ಕಾಮಗಾರಿ ಮಾಡಿ ಸರಿಯಾಗಿ ಎರಡು ದಿನಗಳೂ ಆಗಿಲ್ಲ. ಆಗಲೇ ರಸ್ತೆಯೆಲ್ಲಾ ಕಿತ್ತುಕೊಂಡು ಬಂದಿದ್ದು, ಅಲ್ಲಲ್ಲಿ ಗುಂಡಿ ಬಿದ್ದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ವೇಳೆ ವ್ಯಕ್ತಿಯೊಬ್ಬ ತನ್ನ ಕೈಯಿಂದಲೇ ಡಾಂಬರ್‌ ರಸ್ತೆಯನ್ನು ಕಿತ್ತುಹಾಕಿ, ನೋಡಿ ಇದು ಗುಣಮಟ್ಟದ ರಸ್ತೆಯೇ? ಎಂದು ಪ್ರಶ್ನಿಸಿದ್ದಾರೆ. ಕಳಪೆ ಕಾಮಗಾರಿಗೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಗುತ್ತಿಗೆದಾರ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದಿದ್ದಾರೆ.

ಶೀಘ್ರವಾಗಿ ಕಳಪೆ ಕಾಮಗಾರಿಯನ್ನು ಸರಿಪಡಿಸಬೇಕು, ಜೊತೆಗೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು, ಇಂಜಿನಿಯರ್​ನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಮಾಹಿತಿ ಪಡೆಯಲು ಇಂಜಿನಿಯರ್​ಗೆ ಕರೆ ಮಾಡಿದರೆ ಸ್ವೀಕರಿಸಿಲ್ಲ ಎಂದು ತಿಳಿದು ಬಂದಿದೆ.

ABOUT THE AUTHOR

...view details