ಚಾಮರಾಜನಗರ: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಕನ್ನಡ ಭಾಷೆಯಲ್ಲಿಯೇ ಮಂತ್ರೋಚ್ಚಾರಣೆ, ಪೂಜಾ ವಿಧಿ ವಿಧಾನಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಸೂಚಿಸಿದ್ದಾರೆ.
ದೇವಸ್ಥಾನಗಳಲ್ಲಿ ಕನ್ನಡದಲ್ಲೇ ಮಂತ್ರ ಹೇಳಿ: ಚಾಮರಾಜನಗರ ಡಿಸಿ ಸೂಚನೆ! - Worship in Kannada.. DC Noties
ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಕನ್ನಡ ಭಾಷೆಯಲ್ಲಿಯೇ ಮಂತ್ರೋಚ್ಚಾರಣೆ, ಪೂಜಾ ವಿಧಿ ವಿಧಾನಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ
ಜಿಲ್ಲೆಯ ಎ, ಬಿ ಮತ್ತು ಸಿ ಶ್ರೇಣಿಯ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಕನ್ನಡ ಭಾಷೆಯಲ್ಲಿಯೇ ಪೂಜಾ ವಿಧಿ ವಿಧಾನ ಕೈಗೊಳ್ಳಬೇಕು. ಮಂತ್ರೋಚ್ಚಾರಣೆ, ಅರ್ಚನೆ, ಸಂಕಲ್ಪ ಇತ್ಯಾದಿ ಪೂಜಾ ಕೈಂಕರ್ಯವನ್ನು ಚಾಲ್ತಿಯಲ್ಲಿರುವ ಸಂಪ್ರದಾಯ ಹಾಗೂ ಧಾರ್ಮಿಕ ಪದ್ಧತಿಗಳಿಗೆ ಧಕ್ಕೆ ಬಾರದಂತೆ ಕನ್ನಡದಲ್ಲಿ ನೆರವೇರಿಸಿಬೇಕೆಂದು ಅವರು ಸೂಚಿಸಿದ್ದಾರೆ.
ಕನ್ನಡ ಮಂತ್ರೋಚ್ಚಾರಣೆ ಸ್ವಾಗತಾರ್ಹವಾದರೂ ಸಂಸ್ಕೃತದಲ್ಲೇ ಮಂತ್ರಗಳನ್ನು ಕಲಿತಿರುವ ಅರ್ಚಕರು ಏಕಾಏಕಿ ಕನ್ನಡದಲ್ಲಿ ಹೇಳುವುದು ಕಷ್ಟವಾಗಲಿದೆ. ಸ್ವಲ್ಪ ಸಮಯಾವಕಾಶ ನೀಡಬೇಕು ಎಂದು ಅರ್ಚಕರು ಮನವಿ ಮಾಡಿದ್ದಾರೆ.