ಕೊಳ್ಳೇಗಾಲ (ಚಾಮರಾಜನಗರ):ದೀರ್ಘಕಾಲದ ಹೊಟ್ಟೆ ನೋವು ಸಹಿಸಿಕೊಳ್ಳಲಾಗದೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.
ಕೊಳ್ಳೇಗಾಲ: ಹೊಟ್ಟೆ ನೋವಿಗೆ ಬೇಸತ್ತು ನೇಣಿಗೆ ಶರಣಾದ ಯುವತಿ - ಕೊಳ್ಳೇಗಾಲದಲ್ಲಿ ಯುವತಿ ನೇಣು ಬಿಗಿದು ಆತ್ಮಹತ್ಯೆ ಸುದ್ದಿ
ದೀರ್ಘಕಾಲದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ತೇಜಸ್ವಿನಿ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕೆಲವು ವರ್ಷಗಳ ಹಿಂದೆ ತನ್ನ ತಂದೆಯನ್ನು ಕಳೆದುಕೊಂಡ ಈಕೆ, ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿರುವ ತನ್ನ ದೊಡ್ಡಮ್ಮ ವಿಜಯ ಮತ್ತು ದೊಡ್ಡಪ್ಪ ಶಿವಣ್ಣ ಎಂಬುವರ ಆಶ್ರಯದಲ್ಲಿ ಬೆಳೆಯುತ್ತಿದ್ದಳು. ಈಕೆಗೆ ಹಲವಾರು ತಿಂಗಳುಗಳಿಂದ ಪದೇ ಪದೇ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದ ಪರಿಣಾಮ ಬೇಸತ್ತ ಯುವತಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.
ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ಮೃತಳ ಪೋಷಕರು ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ಶವವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ.