ಕರ್ನಾಟಕ

karnataka

ETV Bharat / state

ಸ್ನೇಹಿತರಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೆಸೇಜ್​ ಮಾಡಿ ನೀರಿಗೆ ಹಾರಿದ ಯುವಕ.. ಸಾಲಬಾಧೆ ಶಂಕೆ - ಈಟಿವಿ ಭಾರತ ಕನ್ನಡ

ತನ್ನ ಸ್ನೇಹಿತರಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿ ನೀರಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂನಲ್ಲಿ ನಡೆದಿದೆ.

youth-commits-suicide-by-jumping-into-the-water
ಸ್ನೇಹಿತರಿಗೆ ಆತ್ಮಹತ್ಯೆ ಮಾಡುವುದಾಗಿ ಮೆಸೇಜ್​ ಮಾಡಿ ನೀರಿಗೆ ಹಾರಿದ ಯುವಕ.. ಸಾಲಬಾಧೆ ಶಂಕೆ

By

Published : Oct 10, 2022, 9:36 PM IST

ಚಾಮರಾಜನಗರ :ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂನಲ್ಲಿ ನಡೆದಿದೆ. ಕಲ್ಲಹಳ್ಳಿ ಗ್ರಾಮದ ಸಚಿನ್(24) ಮೃತ ಯುವಕ ಎಂದು ತಿಳಿದುಬಂದಿದೆ.

ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ‌ ಮಾಡಿಕೊಂಡಿದ್ದ ಈತ ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಾಯುವ ಮುನ್ನ ತನ್ನ‌ ಸ್ನೇಹಿತರಿಗೆ ವಾಟ್ಸ್​ಆ್ಯಪ್​​ ಸಂದೇಶ ಕಳುಹಿಸಿ ನಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಮನೆಯವರಿಗೆ ತಿಳಿಸುವಂತೆ ಹೇಳಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ರಸ್ತೆ ಅಪಘಾತ.. ಸಿಐಡಿ ಮಹಾನಿರ್ದೇಶಕ ಗೋವಿಂದ್​ ಸಿಂಗ್​​ ಪತ್ನಿ ಸಾವು

ABOUT THE AUTHOR

...view details