ಚಾಮರಾಜನಗರ: ಲಾಕ್ಡೌನ್ ನಡುವೆ ಅನಗತ್ಯವಾಗಿ ಸಂಚರಿಸುತ್ತಿದ್ದವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಈ ನಡುವೆ ನಗರದ ಜಾಮಿಯಾ ಮಸೀದಿ ಬಳಿ ಪೊಲೀಸರನ್ನು ಕಂಡು ಸ್ಥಳದಲ್ಲೇ ಬೈಕ್ ಬಿಟ್ಟು ಯುವಕರು ಕಾಲ್ಕಿತ್ತಿದ್ದಾರೆ.
ಚಾಮರಾಜನಗರ ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಾಮಿಯಾ ಮಸೀದಿ ರಸ್ತೆಗೆ ತೆರಳಿದ್ದ ವೇಳೆ ಬೈಕ್ನಲ್ಲಿ ಎದುರಿಗೆ ಬಂದ ಯುವಕರಿಬ್ಬರು ಬೈಕ್ ರಸ್ತೆ ಬದಿ ನಿಲ್ಲಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.