ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿಂದು 2 ವರ್ಷದ ಮಗು ಸೇರಿದಂತೆ 107 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 715ಕ್ಕೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 33, ಚಿಂತಾಮಣಿಯಲ್ಲಿ 24, ಬಾಗೇಪಲ್ಲಿಯಲ್ಲಿ 20, ಗೌರಿಬಿದನೂರಿನಲ್ಲಿ 16, ಶಿಡ್ಲಘಟ್ಟದಲ್ಲಿ 10 ಹಾಗೂ ಗುಡಿಬಂಡೆಯಲ್ಲಿ 3 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 715ಕ್ಕೆ ಏರಿಕೆಯಾಗಿದೆ. ಅಲ್ಲದೇ, ಚಿಂತಾಮಣಿಯ ಸೊಂಕಿತ P-39838 ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರ: 107 ಮಂದಿಯಲ್ಲಿ ಸೋಂಕು ದೃಢ, 25 ಮಂದಿ ಗುಣಮುಖ - Chickballapura corona news
107 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 715ಕ್ಕೆ ಏರಿಕೆಯಾಗಿದೆ.
Chickballapura corona case
ಬಹುತೇಕ ಜನರಿಗೆ ಸೋಂಕಿತರ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದೆ. ಸದ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 715ಕ್ಕೆ ಏರಿಕೆಯಾಗಿದ್ದು, ಇಂದು 25 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.