ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಂಕಿತರ ಸಂಪರ್ಕದಿಂದ 117 ಮಂದಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, 49 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ 56, ಚಿಂತಾಮಣಿ 28, ಗೌರಿಬಿದನೂರು 19,ಬಾಗೇಪಲ್ಲಿ 2, ಶಿಡ್ಲಘಟ್ಟ 12 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೇ ಜಿಲ್ಲೆಯಾದ್ಯಂತ 117 ಸೋಂಕಿತರು ಪತ್ತೆಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಗೇಪಲ್ಲಿಯ ಓರ್ವ ಸೋಂಕಿತ ಮೃತಪಟ್ಟಿದ್ದಾನೆ.