ಚಿಕ್ಕಬಳ್ಳಾಪುರ:ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಜಿಲ್ಲೆಯಾದ್ಯಂತ ಸೂಕ್ತ ಭದ್ರತೆಗಳೊಂದಿಗೆ 12,215 ವಿದ್ಯಾರ್ಥಿಗಳು 22 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗಿದ್ದಾರೆ.
ಈಗಾಗಲೇ ಜಿಲ್ಲೆಯಲ್ಲಿ 22 ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ಸೋಂಕು ಹರಡದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳನ್ನು ಕರೆತರಲು 200 ಬಸ್‌ಗಳನ್ನು ನಿಯೋಜನೆ ಮಾಡಲಾಗಿದ್ದು, ಪರೀಕ್ಷೆಯ ಹಾಲ್ ಟಿಕೆಟ್ ಹಾಗೂ ಐಡಿ ಕಾರ್ಡ್ ತೋರಿಸಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಬೆಳಗ್ಗೆ 8:30ಕ್ಕೆ ಪರೀಕ್ಷಾ ಕೊಠಡಿಗೆ ಹಾಜರಾಗಲು ಮನವಿ ಮಾಡಲಾಗಿದ್ದು, ಮಾಸ್ಕ್ ಬಳಸುವಂತೆ ಸೂಚಿಸಲಾಗಿದೆ. ಅದೇ ರೀತಿ ಪರೀಕ್ಷಾ ಕೇಂದ್ರದಿಂದ 200 ಮೀಟರ್ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 3209 ವಿದ್ಯಾರ್ಥಿಗಳು, ಚಿಂತಾಮಣಿ ತಾಲೂಕಿನಲ್ಲಿ 3326 ವಿದ್ಯಾರ್ಥಿಗಳು, ಗೌರಿಬಿದನೂರು ತಾಲೂಕಿನಲ್ಲಿ 2230 ವಿದ್ಯಾರ್ಥಿಗಳು, ಬಾಗೇಪಲ್ಲಿ ತಾಲೂಕಿನಲ್ಲಿ 1676 ವಿದ್ಯಾರ್ಥಿಗಳು, ಶಿಡ್ಲಘಟ್ಟ ತಾಲೂಕಿನಲ್ಲಿ 1671 ಹಾಗೂ ಗುಡಿಬಂಡೆ ತಾಲೂಕಿನಲ್ಲಿ 103 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 22 ಕೇಂದ್ರಗಳಲ್ಲಿ 12,215 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.